ವಿಧಾನಸೌಧದಿಂದ ಮೆಜೆಸ್ಟಿಕ್‌ಗೆ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌

ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮೆಜೆಸ್ಟಿಕ್‌ಗೆ ಬಿಎಂಟಿಸಿ ಬಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ. ಮೆಜೆಸ್ಟಿಕ್​​ನಲ್ಲಿ ಟಿಕೆಟ್ ನೀಡುವ ಮೂಲಕ ಮತ್ತೆ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಬಿಎಂಟಿಸಿಯ ಡಿಪೋ 10ರ ಕೆಎ 57 ಎಫ್​​​ 5324 ಸಂಖ್ಯೆಯ ಬಸ್​​ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​​​​​, ಸಚಿವ ರಾಮಲಿಂಗಾರೆಡ್ಡಿ, ಇಲಾಖೆ ಅಧಿಕಾರಿಗಳು ಬಸ್​ನಲ್ಲಿ ಪ್ರಯಾಣ ಮಾಡಿದ್ದಾರೆ.

ಬಸ್​ ವಿಧಾನಸೌಧದಿಂದ ಹೋಟೆಲ್ ಕ್ಯಾಪಿಟಲ್​, ರಾಜಭವನ ರಸ್ತೆ, ಮಹಾರಾಣಿ ಕಾಲೇಜ್​ ಬಳಿ ಇರುವ ಅಂಡರ್ ಪಾಸ್ ರಸ್ತೆ​​​​​​, ಮೈಸೂರು ಬ್ಯಾಂಕ್​ ಸರ್ಕಲ್​, ಕೆ.ಜಿ.ರೋಡ್​​ ಮೂಲಕ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!