Monday, October 2, 2023

Latest Posts

ಇಸ್ರೋ ಕೇಂದ್ರಕ್ಕೆ ಇಂದು ಸಿಎಂ ಭೇಟಿ: ವಿಜ್ಞಾನಿಗಳಿಗೆ ರಾಜ್ಯ ಸರ್ಕಾರದಿಂದ ವಿಶೇಷ ಗೌರವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದಿಸಿದರು.

ಅವರ ಭೇಟಿಯ ವೇಳೆ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿಯನ್ನು ಸಿಎಂ ಅಭಿನಂದಿಸಿದರು. ಬಳಿಕ ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಗೌರವಿಸಿ, ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು. ನಂತರ ವಿಜ್ಞಾನಿಗಳ ಜೊತೆ ಕೆಲಹೊತ್ತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಈ ವೇಳೆ ಅವರ ಜತೆ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್‌. ಬೋಸರಾಜು ಅವರೂ ಸಹ ಇದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಂದ್ರಯಾನ-3 ಯಶಸ್ಸಿನಲ್ಲಿ ಭಾಗಿಯಾದ ಇಸ್ರೋ ವಿಜ್ಞಾನಿಗಳನ್ನು ರಾಜ್ಯ ಸರ್ಕಾರದಿಂದ ಗೌರವಿಸಲಾಗುತ್ತದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರದ ವತಿಯಿಂದ ಇಸ್ರೋ ವಿಜ್ಞಾನಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ನಿನ್ನೆ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡ್‌ ಆಗಿದೆ. ಈ ಯಶಸ್ಸನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಅದಕ್ಕೆ ಕಾರಣಕರ್ತರಾಗಿರುವ ವಿಜ್ಞಾನಿ ಮತ್ತು ಸಿಬ್ಬಂದಿಗಳನ್ನು ಇಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!