ಇಂದು ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಸಂಚಲನ ಮೂಡಿಸಿದ ನೇಹಾ ಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೌನವಹಿಸಿದ್ದಾರೆ ಎಂದು ಹೇಳಲಾಗಿತ್ತು. ನೇಹಾ ತಂದೆ ಕಾಂಗ್ರೆಸ್‌ ಕಾರ್ಪೋರೇಟರ್‌ ನಿರಂಜನ್‌ ಹಿರೇಮಠ ಸಿಎಂ ಸಿದ್ದರಾಮಯ್ಯ ಹೇಳಿಕೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಸಿಎಂ ಕರೆ ಮಾಡಿ ಸಾರಿ ಹೇಳಿದ್ದರು. 

ಈ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ನಿರಂಜನ ಹಿರೇಮಠ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಹುಬ್ಬಳ್ಳಿಯ ನೇಹಾ ಹಿರೇಮಠ್​ ಕೊಲೆ ಪ್ರಕರಣ ರಾಜಕೀಯ ಕಿತ್ತಾಟಕ್ಕೆ ವೇದಿಕೆ ಆಗಿತ್ತು. ಬಿಜೆಪಿಯ ಘಟಾನುಘಟಿ ನಾಯಕರು, ನಿರಂಜನ್​ ಹಿರೇಮಠ್​ ಮನೆಗೆ ತೆರಳಿ, ಸಾಂತ್ವನ ಹೇಳಿದ್ದರು.

ತಮ್ಮ ಪಕ್ಷದ ಕಾರ್ಪೊರೇಟರ್​ ಪುತ್ರಿಯೇ ಅನ್ಯಕೋಮಿನ ಯುವಕನಿಂದ ಬಲಿಯಾಗಿದ್ರೂ ಸಿಎಂ ಸಾಂತ್ವನ ಹೇಳಲು ಮುಂದಾಗಿರಲಿಲ್ಲ. ಇದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಖುದ್ದು ನಿರಂಜನ್​ ಹಿರೇಮಠ್​ ಅವರೇ ಬೇಸರ ಹೊರಹಾಕಿದ್ರು. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ನಿನ್ನೆ ಫೋನ್​ ಕರೆ ಮಾಡಿ, ಸಾಂತ್ವನ ಹೇಳಿದ್ದರು. ಇಂದು ನೇಹಾ ಹಿರೇಮಠ್​ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿಲಿದ್ದಾರೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಇವತ್ತು ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಪ್ರಚಾರಕ್ಕೂ ಮುನ್ನ, ಕೊಲೆಯಾದ ನೇಹಾ ಮನೆಗೆ ಭೇಟಿ ನೀಡಿ, ನಿರಂಜನ್​ ಹಿರೇಮಠ್​ ಅವರಿಗೆ ಧೈರ್ಯ ತುಂಬಲಿದ್ದಾರೆ. ಈ ಮೂಲಕ ​ ಬಿಜೆಪಿ ನಾಯಕರ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್​ ಹಾಕಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here