ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ ಬೆನ್ನಲ್ಲೇ ಪ್ರತಿಭಟನೆಗೆ ಮುಂದಾದ ವೇಳೆ ರಕ್ತದೊತ್ತಡ ಹೆಚ್ಚಾಗಿ ಕುಸಿದು ಬಿದ್ದಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅರೋಗ್ಯ ಸದ್ಯ ಚೇತರಿಕೆಯಾಗುತ್ತಿದ್ದಾರೆ.
ಯತ್ನಾಳ್ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಪತ್ನಿ ಶೈಲಜ ಪಾಟೀಲ್ ಹಾಗೂ ಪುತ್ರ ರಮನಗೌಡ ಪಾಟೀಲ್ ಆಸ್ಪತ್ರೆ ದೌಡಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಕೂಡ ಪೊರ್ಟೀಸ್ ಆಸ್ಪತ್ರೆಗೆ ಭೇಟಿ ಮಾಡಿದ್ದಾರೆ.
ಇದೀಗ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಕೂಡ ತೆರಳಿದ್ದಾರೆ.