ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನಾಂಬ ದೇವಿ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ಇಂದು ಹಾಸನಾಂಬ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ.
ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿದ್ದರಾಮಯ್ಯ, ಮಧ್ಯಾಹ್ನ 12.30ಕ್ಕೆ ಹಾಸನಾಂಬೆ ದರುಶನ ಪಡೆಯಲಿದ್ದಾರೆ. ಈ ವೇಳೆ ಸಿಎಂಗೆ ಸಚಿವರು ಮತ್ತು ಶಾಸಕರು ಸಾಥ್ ನೀಡಲಿದ್ದಾರೆ. ಇನ್ನು ಹಾಸನಾಂಬೆ ದರುಶನದ ಬಳಿಕ ಹಾಸನ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
ಹಾಸನಾಂಬ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಇದಕ್ಕಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಕೂಡ ನಿಯೋಜಿಸಲಾಗಿದೆ.
ವರ್ಷಕ್ಕೊಮ್ಮೆ ದರುಶನ ನೀಡುವ ಹಾಸನಾಂಬೆ ದರ್ಶನಕ್ಕೆ 5ನೇ ದಿನವೂ ಭಕ್ತಸಾಗರವೇ ಹರಿದು ಬಂದಿದೆ. ನವೆಂಬರ್ 15ರಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲಿದೆ.