ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನಾಂಬ ದೇವಿ ದರುಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ಇಂದು ಹಾಸನಾಂಬ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ದೇವಿಯ ದರುಶನ ಪಡೆದಿದ್ದಾರೆ.
ಇಂದು ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನದ ವೇಳೆಗೆ ಹಾಸನಾಂಬೆ ದರುಶನ ಪಡೆದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಗೆ ಸಚಿವ ಕೆಎನ್ ರಾಜಣ್ಣ, ಶಾಸಕ ಶಿವಲಿಂಗೇಗೌಡ ಕೂಡ ಸಾಥ್ ನೀಡಿದ್ದಾರೆ.
ವರ್ಷಕ್ಕೊಮ್ಮೆ ದರುಶನ ನೀಡುವ ಹಾಸನಾಂಬೆ ದರುಶನಕ್ಕೆ 5ನೇ ದಿನವೂ ಭಕ್ತಸಾಗರವೇ ಹರಿದು ಬಂದಿದೆ. ನವೆಂಬರ್ 15ರಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲಿದೆ.