ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಲಿದ್ದಾರೆ.
ನಿನ್ನೆ ಸಂಜೆ ಚಂದ್ರನ ಅಂಗಳಕ್ಕೆ ಚಂದ್ರಯಾನ-3 ಕಾಲಿಟ್ಟಿತು. ಈ ವೇಳೆ ಇಡೀ ದೇಶವೇ ಸಂಭ್ರಮಿಸಿತ್ತು. ಇದೇ ವೇಳೆ ಸಿಎಂ ಸಿದ್ದರಾಮಯ್ಯನವರು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೋ ಕಚೇರಿಗೆ ಖುದ್ದು ಮುಖ್ಯಮಂತ್ರಿ ಭೇಟಿ ನೀಡಿ, ವಿಜ್ಞಾನಿ ಮತ್ತು ಸಿಬ್ಬಂದಿಗಳನ್ನು ಅಭಿನಂದನೆ ಸಲ್ಲಿಸಲಿದ್ದಾರೆ.