ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನೇಹಾ ಹತ್ಯೆ ಪ್ರಕರಣ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ನಿರಂಜನ ಹಿರೇಮಠ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಇಂದು ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವಂತ ನೇಹಾ ತಂದೆ ನಿರಂಜನ ಹಿರೇಮಠ ಅವರ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದರು.

ಇದೇ ಸಂದರ್ಭ ಸಿಎಂ ಸಿದ್ಧರಾಮಯ್ಯ ಅವರು ನೇಹಾ ಹಿರೇಮಠ ಅವರ ಹತ್ಯೆ ಸಂಬಂಧ ತಂದೆ ನಿರಂಜನ ಹಿರೇಮಠ ಅವರಿಂದ ಮಾಹಿತಿಯನ್ನು ಪಡೆದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಚಿವರಾದ ಸಂತೋಷ್ ಲಾಡ್, ಹೆಚ್.ಕೆ ಪಾಟೀಲ್ ಹಾಗೂ ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ ಅವರು ಸಾಥ್ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!