ಕಲುಷಿತ ನೀರಿನ ಸೇವನೆ ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್: ಸಿಎಂ ಖಡಕ್‌ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಸೇವನೆ ಅನಾಹುತ ಮರುಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದ ವೇಳೆ ಮಾತನಾಡಿದ ಅವರು, ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡುತ್ತಾ ಇದೀರಿ? ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ.

ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ. ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ವಿಶೇಷ ತಂಡ ರಚಿಸಿ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆಯಾಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!