Monday, December 11, 2023

Latest Posts

ಇಂದು ಮೈಸೂರಿನಲ್ಲಿ ದಸರಾ ವೈಮಾನಿಕ ಪ್ರದರ್ಶನ: ಸಿಎಂ ಸಿದ್ದರಾಮಯ್ಯ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಾಡಿನೆಲ್ಲೆಡೆ ಇಂದು ದಸರಾ ಹಬ್ಬದ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದೆ. ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬದಿಂದ ಕಂಗೊಳಿಸುತ್ತಿದೆ. ವಿವಿಧ ಪೂಜೆ, ಕಾರ್ಯಕ್ರಮಗಳು ವಿದೇಶಿ ಪ್ರವಾಸಿಗರು, ರಾಜ್ಯದ ಜನರನ್ನು ಆಕರ್ಷಿಸುತ್ತಿದ್ದು, ಇಂದು ಸಂಜೆ ವೈಮಾನಿಕ ಪ್ರದರ್ಶನ ನಡೆಯಲಿದೆ.

ಇಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ರಿಹರ್ಸಲ್ ನಡೆಯಲಿದೆ.

ಈ ವೈಮಾನಿಕ ಪ್ರದರ್ಶನದಲ್ಲಿ ವಾಯು ಸೇನೆಯ ವಿವಿಧ ಯುದ್ಧ ವಿಮಾನಗಳು, ಲಘು ವಿಮಾನಗಳು ಭಾಗಿಯಾಗಲಿದ್ದು, ವಾಯು ಸೇನೆಯ ವಿವಿಧ ಯುದ್ಧ ವಿಮಾನಗಳು, ಲಘು ವಿಮಾನಗಳು ಏರ್ ಶೋ ನಲ್ಲಿ ಭಾಗವಹಿಸಲಿದ್ದು, ವಾಯುಸೇನೆಯ ಯೋಧರಿಂದ ಸಾಹಸ ಪ್ರದರ್ಶನ ನಡೆಯಲಿದೆ. ಇಂದು ಪಾಸ್ ಹೊಂದಿರುವವರಿಗೆ ಮಾತ್ರ ಮೈದಾನಕ್ಕೆ ಪ್ರವೇಶ ಅವಕಾಶವಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!