ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

ಹೊಸ ದಿಗಂತ ವರದಿ, ವಿಜಯಪುರ:

ಮುಖ್ಯಮಂತ್ರಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯಾ ಅಂತಾ ಒಪ್ಪತ್ತೀರಾ ? ಎಂದು ಕಿಡಿ ಕಾರಿದರು.

ಮುಡಾ ಹಾಗೂ ವಾಲ್ಮೀಕಿ ಹಗರಣ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣದಲ್ಲಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಆಗಿದೆ. ಹಿಂದುಳಿದ ಹಾಗೂ ದಲಿತರಿಗೆ ಕಾಂಗ್ರೆಸ್ ಮೋಸ ಮಾಡಿ ಮಾಡಿ ಕೇಂದ್ರ, ರಾಜ್ಯದಲ್ಲಿ ಆಡಳಿತ ಮಾಡಿದ್ದಾರೆ. ನೇರವಾಗಿ ಕಾಂಗ್ರೆಸ್ ಬೆತ್ತಲೆ ಆಗಿ ಹೋಗಿದೆ ಎಂದು ದೂರಿದರು.

ಇದೇ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ. ಆರ್ಥಿಕ ಇಲಾಖೆ ಸಿದ್ದರಾಮಯ್ಯ ಕೈಯಲ್ಲಿ ಇದೆ. ಆದರೆ, ಕಾಂಗ್ರೆಸ್ ಬಗ್ಗೆ ಯಾವ ಪದ ಬಳಸಬೇಕು ತಿಳಿತ್ತಾ ಇಲ್ಲ ಎಂದರು.

ಇದು ಅಸಹ್ಯ ರಾಜಕಾರಣ. 187 ಕೋಟಿ ಹಣ ತಿಂದು, ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮನೆಗೆ 25 ಲಕ್ಷ ಕೊಡಲು ಹಿಂದೆ ಮುಂದೆ ನೋಡ್ತಾ ಇದ್ದಾರೆ. ಒಂದಲ್ಲ, ಎರಡಲ್ಲ, ಹತ್ತಾರೂ ಹಗರಣಗಳು, ಸಾಕ್ಷಿಗಳು ಬೇಗ ಸಿಗುತ್ತೇವೆಂದು ಕಾಂಗ್ರೆಸ್ ಸರ್ಕಾರ ಸಿಬಿಐಗೆ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಬೆಲೆಬಾಳುವ 14 ಸೈಟ್‌ ಗಳನ್ನು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಎಂಟುವರೆ ಕೋಟಿ ಘೋಷಣೆ ಮಾಡಿದ್ದಾರೆ. ಆದರೆ, ಮುಡಾ ಹಗರಣ ಬಂದ್ಮೇಲೆ 60 ಕೋಟಿ ಕೊಟ್ಟು ಬಿಡಿ ನಾನು ಸುಮ್ಮನೆ ಆಗುತ್ತೇನಿ ಎಂದಿದ್ದಾರೆ ಎಂದರು.

ಬಿಜೆಪಿಯ 22 ಹಗರಣದ ಬಗ್ಗೆ ಕಾಂಗ್ರೆಸ್‌ನವರು ಹೇಳಿದ್ದಾರೆ. ಅದ ಬಗ್ಗೆ ಪಟ್ಟಿ ಬಿಡುಗಡೆ ಮಾಡುವಂತೆ ಸವಾಲ್ ಹಾಕಿದರು.

ಇನ್ನು ಬಿಜೆಪಿಯ 22 ಹಗರಣ, ವಾಲ್ಮೀಕಿ ನಿಗಮ, ಮುಡಾ ಹಗರಣ ಸಿಬಿಐಗೆ ಕೊಡಬೇಕು. ಅಸಹ್ಯ ರಾಜಕಾರಣ ಕರ್ನಾಟಕ ‌ಇತಿಹಾಸದಲ್ಲಿ ನಡೆದಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!