ಕಲಬುರಗಿಯಲ್ಲಿ ಇಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ಇಂದು ಕಲಬುರಗಿ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ನಗರದ ಎನ್‌ವಿ ಕಾಲೇಜು ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಸಮಾರಂಭ ಆರಂಭವಾಗಲಿದ್ದು, 10 ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ‘ಶೂನ್ಯ ವಿದ್ಯುತ್ ಬಿಲ್’ ರಸೀದಿ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರಹೀಂಖಾನ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಂಸದರು ಆಗಮಿಸಲಿದ್ದಾರೆ.

1 ಕೋಟಿ 41 ಲಕ್ಷ ಫಲಾನುಭವಿಗಳಿಂದ ಅರ್ಜಿ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ಇನ್ನೂರು ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಹೇಳಿತ್ತು. ಅದರ ಅನ್ವಯ ಜುಲೈ ಒಂದರಿಂದಲೇ ಈ ಯೋಜನೆಗೆ ನೊಂದಣಿ ಆರಂಭವಾಗಿತ್ತು, ಇಂದು ಈ ಯೋಜನೆಗೆ ಚಾಲನೆ ಸಿಗಲಿದೆ.

ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಗೆ ಈವರೆಗೂ 1,41,23,240 ಫಲಾನುಭವಿಗಳು ಆನ್‌ಲೈನ್‌ ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!