ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡು ಪರಿಸ್ಥಿತಿ ಬರಲಿದೆ: ಶಾಸಕ ಮಹೇಶ ಟೆಂಗಿನಕಾಯಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಮುಡಾ ಹಗರಣದ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಲೆ ಬೇಕು. ಶೀಘ್ರದಲ್ಲಿಯೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೪೦ ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ್ದೇನೆ ಎಂದು ಹೇಳುತ್ತಿದ್ದರು. ಆದರೆ ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರ ಹಾಗೂ ಸಿಎಂ ಅವರ ಪಾತ್ರ ಇರುವುದು ಸ್ಪಷ್ಟವಾಗುತ್ತಿದೆ ಎಂದರು.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗ ಅವರನ್ನು ದೇಶಾದ್ಯಾಂತ ಕಳನಾಯಕನಾಗಿ ಮಾಡಿದರು. ಕಾಂಗ್ರೆಸ್‌ಗೆ ನೈತಿಕತೆ ಇದ್ದರೆ ಒಂದು ಪ್ರಶ್ನೆಯೂ ಮಾಡಬಾರದಿತ್ತು. ಕೋರ್ಟ್‌ಗೂ ಮೊರೆ ಹೋದರು. ಸದ್ಯ ನ್ಯಾಯಾಲಯದ ಆದೇಶ ಬಂದಿದ್ದು, ಅದರಂತೆ ಸಿಎಂ ನಡೆದುಕೊಳ್ಳಬೇಕು. ಮುಖ್ಯಮಂತ್ರಿ ಸತ್ಯ ಹರಿಶ್ಚಂದ್ರರಾಗಿದ್ದರೆ ಆರೋಪದಿಂದ ಮುಕ್ತರಾಗಿ ಮತ್ತೆ ಸಿಎಂ ಆಗಲಿ ಎಂದು ತಿಳಿಸಿದರು.

ನ್ಯಾಯಾಲಯ ಆದೇಶ ಬಂದರೂ ಸಹ ರಾಜೀನಾಮೆ ನೀಡದೆ ಬಂಡತನ ಪ್ರದರ್ಶನ ಮಾಡಲು ಸಿಎಂ ಹೊರಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಸಹಕರಿಸಬೇಕು. ಇನ್ನೂ ವಾಲ್ಮೀಕಿ ನಿಗಮದ ಹಗರಣದಲ್ಲಿಯೂ ಸಹ ಸಿಎಂ ಹೆಸರು ಬರಲಿದೆ. ನಾಚಿಗೆ, ಮಾನ, ಮರ್ಯಾದೆ ಇದ್ದಲ್ಲಿ ತಕ್ಷಣ ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!