Saturday, December 9, 2023

Latest Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಂಡ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು ದಾವಣಗೆರೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್​​ನಲ್ಲಿ ದಾವಣಗೆರೆಗೆ ತೆರಳಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್ ಅವರ​ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಶುಭಹಾರೈಸಲಿದ್ದಾರೆ. ನಂತರ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!