ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.
ಆಗಸ್ಟ್ 30ರಂದು ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೈಸೂರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಕಾಂಗ್ರೆಸ್ನ ಪಂಚ ಗ್ಯಾರಂಟಿಗಳ ಪೈಕಿ ಮಹತ್ವದ್ದಾಗಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಯೋಜನೆ ಜಾರಿಗೆ ಕಾಂಗ್ರೆಸ್ ನಿರ್ಧರಿಸಿದ್ದು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗಿದೆ.