ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭಾತೃತ್ವದ ಜ್ಯೋತಿ ಬೆಳಗಲಿ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ದೇಶದೆಲ್ಲೆಡೆ ಸಂಭ್ರಮ ಮನೆ  ಮಾಡಿದ್ದು, ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭಾತೃತ್ವದ ಜ್ಯೋತಿ ಬೆಳಗಲಿ ಎಂದು ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ, “1947 ಆಗಸ್ಟ್ 15 ರಂದು ಕೋಟ್ಯಂತರ ಭಾರತೀಯರ ತ್ಯಾಗ, ಬಲಿದಾನದ ಫಲವಾಗಿ ನಮಗೆ ದೊರೆತಿರುವ ಈ ಸ್ವಾತಂತ್ರ್ಯವನ್ನು ಸಮಾಜದಲ್ಲಿರುವ ಅಸಮಾನತೆ, ಶೋಷಣೆ, ತಾರತಮ್ಯಗಳ ನಿರ್ಮೂಲನೆಗೈಯ್ಯುವ ಶಪಥದೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ. ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭಾತೃತ್ವದ ಜ್ಯೋತಿ ಬೆಳಗಲಿ ಎಂದು ಹಾರೈಸುತ್ತೇನೆ. ನಾಡಬಂಧುಗಳಿಗೆ ಸ್ವಾತಂತ್ರ್ಯೋತ್ಸವದ ಶುಭಕಾಮನೆಗಳು” ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!