ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದೆಲ್ಲೆಡೆ ಇಂದು ಕನ್ನಡದ ಕಂಪು ಹರಡಿದ್ದು, ಸಿಎಂ ಸಿದ್ದರಾಮಯ್ಯ ಸಮಸ್ತ ಕನ್ನಡಿಗರಿಗೆ ಕನ್ನಡ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು.
ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ.
ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.