ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ನಿನ್ನೆ ಮೊದಲ ದಿನ ಕಾಂಗ್ರೆಸ್ ಹೈಕಮಾಂಡ್, ರಾಷ್ಟ್ರಪತಿ ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಇವತ್ತು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಭೇಟಿಗೆ ಕಾಲಾವಕಾಶ ಸಿಕ್ಕಿದೆ. ಪ್ರಧಾನಿ ಭೇಟಿಗೆ ಸಮಯ ಕೇಳಿದ್ದಾರೆ. ಭೇಟಿ ವೇಳೆ ಅನುದಾನ ಬಿಡುಗಡೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯದ ನಾನಾ ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ಹಾಗೂ ಅನುದಾನ ಬೇಡಿಕೆಗಳ ಬಗ್ಗೆ ಪ್ರಧಾನಿಯವರೊಂದಿಗೆ ಮಾತುಕತೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ತಯಾರಿ ಮಾಡಿಕೊಂಡಿದ್ದಾರೆ.