ರಾಜಕೀಯಕ್ಕೆ ನಿವೃತ್ತಿ ಕುರಿತು ಸಿಎಂ ಸಿದ್ದರಾಮಯ್ಯ ಸ್ಫೋಟಕ ಮಾತು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆಯ ಚರ್ಚೆಗಳು ಹೆಚ್ಚುತ್ತಲೇ ಇದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸದ್ಯಕ್ಕೆ ಚುನಾವಣೆ ರಾಜಕೀಯಕ್ಕೆ ನಿವೃತ್ತಿಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಸಿದ್ದಾಮಯ್ಯ ಟಾಂಗ್ ನೀಡಿದ್ದಾರೆ.

ಚುನಾವಣೆ ರಾಜಕೀಯ ಸ್ವಲ್ಪ ಮಟ್ಟಿಗೆ ಸಾಕು ಎನಿಸುತ್ತಿದೆ. ಆದರೆ, ಜನರ ಪ್ರೀತಿ-ವಿಶ್ವಾಸ ಇರುವುದರಿಂದ ಮುಂದುವರಿಯಬೇಕೋ ಅಥವಾ ಬೇಡವೋ ಎಂಬುದನ್ನು ಜನರ ಅಭಿಪ್ರಾಯ ಪಡೆದು ತೀರ್ಮಾನಿಸುತ್ತೇನೆ.ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ನಿಲ್ಲಬಾರದು ಅಂತ ಮಾನಸಿಕವಾಗಿ ಸಿದ್ಧನಾಗಿದ್ದೇನೆ. ಆದರೆ, ಜನರು, ಹಿತೈಶಿಗಳು ಮತ್ತು ಸ್ನೇಹಿತರು ರಾಜಕೀಯದಲ್ಲಿ ಮುಂದುವರಿಯಬೇಕು ಅಂತಾ ಒತ್ತಡ ಹಾಕುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲೂ ಕೂಡ ಜನರು ನಮಗೆ ಅಧಿಕಾರ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರಕ್ಕೆ ಬರಲು ಜನರ ಆಶೀರ್ವಾದ ಮುಖ್ಯ, ಜನರ ಆಶಿರ್ವಾದ ಇಲ್ಲದೆ ಅಧಿಕಾರ ಸಾಧ್ಯವಿಲ್ಲ. ಇದಾದ ಬಳಿಕ ಮುಖ್ಯಮಂತ್ರಿಯಾಗಬೇಕೆಂದರೆ ಶಾಸಕರ ಹಾಗೂ ಹೈಕಮಾಂಡ್ ಬೆಂಬಲ ಪಡೆಯುವುದು ಕೂಡ ತುಂಬಾ ಮುಖ್ಯ ಎಂದರು. ಇನ್ನೂ ಎರಡನೇ ಅವಧಿಗೂ ತಾವೇ ಸಿಎಂ ಆಗಿ ಮುಂದುವರೆದಿರುವುದು ಸಂತಸ ತಂದಿದೆ ಎಂದರು.

ಇದೇ ಸಂದರ್ಭ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಾನು ದಾಖಲೆಗಳ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಮಾಡಿದ್ದೀನಿ. ದಾಖಲೆ ಮಾಡುವ ನಂಬಿಕೆ, ವಿಶ್ವಾಸ ನನಗೆ ಇದೆ. ಮುಡಾ ಕೇಸ್‌ನಲ್ಲಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದರು. ಬೇಕು ಅಂತಲೇ ರಾಜಕೀಯ ಮಾಡಿದ್ರು. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!