ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದೆ. ಮತ್ತೆ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು.
ಸುಮಾರು ಎರಡು ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದ್ದೇನೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ನನ್ನ ಉತ್ತರಗಳನ್ನು ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಮತ್ತೆ ವಿಚಾರಣೆಗೆ ಬರುವಂತೆ ಹೇಳಿಲ್ಲ ಎಂದರು.