16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅದ್ದೂರಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಇನ್ನು ಇದೆ ವೇಳೆ ನಟ ಶಿವರಾಜ್‌ಕುಮಾರ್ ಚಲನಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಇಂದಿನಿಂದ 8 ದಿನಗಳ ಕಾಲ ನಡೆಯಲಿದೆ. 60ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ.

ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ರಾಯಭಾರಿ ಕಿಶೋರ್ ಕುಮಾರ್, ಉಮಾಶ್ರೀ ಮತ್ತಿತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!