ದಿಗಂತ ವರದಿ ಹಾವೇರಿ:
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮುರುಘರಾಜೇಂದ್ರ ಮಠದಿಂದ ಆರಂಭದ ಪ್ರತಿಭಟನಾ ರ್ಯಾಲಿ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಸಿಎಂ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೇ ಬಿಜೆಪಿಯವರು ಈರೀತಿ ಅಡ್ಡದಾರಿಯ ಕ್ರಮ ಅನುಸರಿಸಲು ಮುಂದಾಗಿ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾಜಿ ಸಚಿವ ಆರ್. ಶಂಕರ, ಶಾಸಕರಾದ ಯು.ಬಿ. ಬಣಕಾರ, ಅರಣ್ಯ ಅಭಿವೃದ್ದಿ ನಿಗಮದ ಅದ್ಯಕ್ಷ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ನೆಹರು ಓಲೇಕಾರ, ಅಜ್ಜಂಪೀರ ಖಾದ್ರಿ, ಮುಖಂಡ ಎಸ್.ಆರ್. ಪಾಟೀಲ, ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ, ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ, ಮುಖಂಡ ಎಂ.ಎಂ. ಮೈದೂರ ಇತರರು ಇದ್ದರು.