ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಪೂರ್ವ ಸಾಲು ಸಾಲು ಸಭೆಯನ್ನು ಇಲಾಖಾ ವಾರು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಅವರು ರಾಜ್ಯ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅಧಿವೇಶನ ನಡೆಸಲು ಸರ್ಕಾರದ ಸಿದ್ಧತೆ ನಡೆಸಿದೆ. ಮಾರ್ಚ್ 3ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಸಾಧ್ಯತೆ ಇದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಬಜೆಟ್ ದಿನಾಂಕ, ಜಂಟಿ ಅಧಿವೇಶನ ದಿನಾಂಕ ಅಂತಿಮಗೊಳಿಸಲಿರುವ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ.
ಎರಡು ದಿನಗಳ ಹಿಂದಷ್ಟೇ ಮಂಡಿ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಎರಡು ದಿನ ಸಿಎಂ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿತ್ತು. ಸದ್ಯ ಸಿಎಂ ವಿಶ್ರಾಂತಿಯಲ್ಲಿದ್ದಾರೆ.