ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಒಕ್ಕಲಿಗರ ಹೃದಯಭಾಗ ಮಾಗಡಿಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ತೆರಳಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ 120 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ವಸತಿ ಸಚಿವ ಜಮೀರ್ ಅಹಮದ್ ಖಾನ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಜೊತೆಗಿದ್ದರು. ಅಮೆರಿಕ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೈರು ಹಾಜರಿಯಲ್ಲಿ ನಡೆದ ಕಾರ್ಯಕ್ರಮ ಕುತೂಹಲ ಕೆರಳಿಸಿತು.
ಒಕ್ಕಲಿಗ ನಾಯಕ ಎನಿಸಿಕೊಂಡವರು ಕೆಂಪೇಗೌಡ ಜಯಂತೋತ್ಸವ ಮಾಡಲಿಲ್ಲ. ನಾವು ನಾಡಪ್ರಭು ಕೆಂಪೇಗೌಡ ಜಯಂತಿ ಮಾಡಿದ್ದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ತಾವು ಒಕ್ಕಲಿಗ ವಿರೋಧಿ ಅಲ್ಲ ಎಂದು ಬಿಂಬಿಸಿಕೊಳ್ಳಲು ಯತ್ನಿಸಿದರು.