Wednesday, November 19, 2025

ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಪತ್ನಿ ಪಾರ್ವತಿ ಅವರು ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಶ್ವಾಸಕೋಶದಲ್ಲಿ ಎದುರಾದ ಸಮಸ್ಯೆಯಿಂದ ಅಸ್ಪಸ್ಥರಾಗಿದ್ದಾರೆ. ಹೀಗಾಗಿ ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಕ್ಷಣವೇ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಇತರರು ಆಸ್ಪತ್ರೆ ದಾಖಲಿಸಿದ್ದಾರೆ. ಸದ್ಯ ಯತೀಂದ್ರ ಸಿದ್ದರಾಮಯ್ಯ ಅಪೋಲೋ ಆಸ್ಪತ್ರೆಯಲ್ಲಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ, ಕಾಂಗ್ರೆಸ್ ಹೈಕಮಾಂಡ್ ಬೇಟಿ ಸಲುವಾಗಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು.

ಸಿದ್ದರಾಮಯ್ಯ ಪಾರ್ವತಿ ಆರೋಗ್ಯದ ಮೇಲೆ ಅಪೋಲೋ ಆಸ್ಪತ್ರೆ ವೈದ್ಯರು ನಿಗಾ ವಹಿಸಿದ್ದಾರೆ. ನುರಿತ ವೈದ್ಯರ ತಂಡ ಪಾರ್ವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!