Tuesday, November 18, 2025

ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು ಸೋಮವಾರ ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆಸ್ಪತ್ರೆಯ ವೈದ್ಯರು ಪಾರ್ವತಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಪಾರ್ವತಿಯವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪಾರ್ವತಿಯವರಿಗೆ ಡಯುರೆಟಿಕ್ಸ್ ನೀಡಲಾಗಿದೆ. ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುನಿಂದ ಪಾರ್ವತಿಯವರನ್ನು ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಹೃದ್ರೋಗ ವಿಭಾಗದ ಹಿರಿಯ ವೈದ್ಯ ಶ್ರೀನಿವಾಸ್ ನೇತೃತ್ವದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಇತ್ತ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ವತಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿರುವ ವಿಚಾರ ತಿಳಿದು ತಕ್ಷಣ ಪತ್ನಿಯನ್ನು ನೋಡಲು ಬೆಂಗಳೂರಿಗೆ ಆಗಮಿಸಿದ್ದಾರೆ.

error: Content is protected !!