ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಳೆ ಸಂಬಂಧಿತ ಹಾನಿಯನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಯಾವುದೇ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಒ ಜತೆ ಕಾನ್ಫರೆನ್ಸ್ ಸಭೆ ನಡೆಸಿದ್ದು, ಜನರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದಿದ್ದಾರೆ. ಹವಾಮಾನ ಮುನ್ಸೂಚನೆಯಂತೆ ಇಂದು ಹಾಗೂ ನಾಳೆ ಭಾರೀ ಮಳೆಯಾಗಲಿದೆ.