ಇಂದು ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗುತ್ತಿದ್ದು, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಂಜೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.

ಡಾ. ಜಬ್ಬಾರ್ ಪಟೇಲ್, ನಟ ಶಿವರಾಜ್ ಕುಮಾರ್, ಬಾಂಗ್ಲಾ ನಟಿ ಅಜಮೇರಿ ಬಂದೋನ್, ವಿಮರ್ಶಕಿ ವಿಯರಾ ಲ್ಯಾಂಗರೋವಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

ಮೂರು ಬಾರಿ ಗ್ರಾಮಿ ಪ್ರಶಸ್ತಿ ಗಳಿಸಿದ ರಿಕಿ ಕೇಜ್ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಲಿದ್ದಾರೆ.

ಉದ್ಘಟನಾ ಚಿತ್ರವಾಗಿ ಬೋಂಜೊರ್ ಸ್ವಿಟ್ಸರ್ಲೆಂಡ್ ಸಿನಿಮಾ ಪ್ರದರ್ಶನವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!