ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ರಾಜ್ಯಪಾಲರ ಆದೇಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದು, ಈ ಸಂಬಂಧ ವಕೀಲರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ರಾಜ್ಯಪಾಲರ ಆದೇಶದ ಬಗ್ಗೆ ಎರಡು ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮೊದಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬೇಕೇ ಅಥವಾ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬೇಕೇ? ಅನುಭವಿ ವಕೀಲರಿಂದ ಸಲಹೆ ಪಡೆಯುತ್ತಾರೆ ಎಂದು ತಿಳಿದುಬಂದಿದೆ.