ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಬಿಗ್ ರಿಲೀಫ್ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ನಿರಾಸೆಯಾಗಿದೆ. ತನಿಖೆ ಮುಂದುವರಿಸಿ, ಅಂತಿಮ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸಿಎಂ ವಿರುದ್ಧದ ಬಿ ರಿಪೋರ್ಟ್ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಇಡಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ, ನ್ಯಾಯಾಲಯ ಅಂತಿಮ ವರದಿ ಬಳಿಕ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದೆ.