Wednesday, August 17, 2022

Latest Posts

ಕಾವೇರಿ ಆಸ್ಪತ್ರೆಗೆ ತೆರಳಿ ನಟ ರಜಿನಿಕಾಂತ್ ಅವರ ಅರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲಿವುಡ್​ನ ನಟ ರಜಿನಿಕಾಂತ್ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿದ್ದು, ಈ ಹಿನ್ನೆಲೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಕೆಲವು ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಜಿನಿ, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಸ್ಟಾಲಿನ್ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಇನ್ನು ಕೆಲವು ದಿನಗಳಲ್ಲಿ ರಜಿನಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 28ರಂದು ರಜಿನಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!