ಭಾಷಣಕ್ಕೆ ಸಿಎಂ ಸ್ಟಾಲಿನ್ ವಿರೋಧ: ಅಧಿವೇಶನದಿಂದ ಹೊರನಡೆದ ರಾಜ್ಯಪಾಲರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ರಾಜ್ಯಪಾಲ ಆರ್‌ಎನ್ ರವಿ ಅವರು ಸೋಮವಾರ ವಿಧಾನಸಭಾ ಅಧಿವೇಶನದಿಂದ ಹೊರನಡೆದ ಪ್ರಸಂಗ ನಡೆದಿದೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ಕಡತಕ್ಕೆ ತೆಗೆದುಕೊಳ್ಳಬೇಕು, ರಾಜ್ಯಪಾಲರು ಸೇರಿಸಿರುವ ಉಳಿದ ಭಾಷಣವನ್ನು ತೆಗೆದುಹಾಕಬೇಕು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸ್ಪೀಕರ್‌ಗೆ ಹೇಳಿದ್ದು, ಈ ಬಳಿಕ ಗವರ್ನರ್ ಆರ್‌ಎನ್ ರವಿ ಸದನದಿಂದ ಹೊರ ನಡೆದರು.

ಜಾತ್ಯತೀತತೆ ಸೇರಿದಂತೆ ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕರುಣಾನಿಧಿ ಅವರಂತಹ ನಾಯಕರ ಉಲ್ಲೇಖವನ್ನು ರಾಜ್ಯ ಸರ್ಕಾರ ಭಾಷಣದಲ್ಲಿ ಸಿದ್ಧಪಡಿಸಿತ್ತು. ಆದರೆ ಭಾಷಣದ ಆ ಭಾಗಗಳನ್ನು ಅವರು ಬಿಟ್ಟುಬಿಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆ ಪ್ರಚಾರ ಮಾಡುವ ದ್ರಾವಿಡ ಮಾದರಿಯ ಉಲ್ಲೇಖವನ್ನೂ ಅವರು ಓದಾದ ಹಿನ್ನೆಲೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಎಂಕೆ ಸ್ಟಾಲಿನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!