ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯ ಬಜೆಟ್ನಲ್ಲಿ ಗೋವುಗಳಿಗೆ ಪ್ರಾಧಾನ್ಯತೆ ನೀಡಲಾಗಿದ್ದು, ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಸ್ಥಾಪನೆಯಾಗಲಿದೆ ಎಂದು ಸಿಎಂ ಹೇಳಿದ್ದಾರೆ.
ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಹೊರ ರಾಜ್ಯದ ದೇಶೀ ತಳಿಗಳಾದ ಗಿರ್, ಸಾಹಿವಾಲ್, ಒಂಗೋಲ್, ಥಾರ್ ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸಲಾಗುತ್ತದೆ ಎಂದಿದ್ದಾರೆ.