October 11, 2026
Sunday, October 11, 2026
spot_img

ರೇವಣ್ಣ–ಡಿಸಿ ವಿವಾದದ ನಡುವೆ ಸಿಎಂ ಎಂಟ್ರಿ: ‘ಬಡವರ ಪರ ಕೆಲಸ ಮಾಡಿ’ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರಾಮ ಪಂಚಾಯಿತಿ ಚುನಾವಣೆಯ ಮೀಸಲಾತಿ ವಿಚಾರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಂದ ಟೀಕೆಗೆ ಗುರಿಯಾಗಿದ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ಬೆಂಬಲಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಂತಿದ್ದಾರೆ.

ಕಸ್ತೂರಿರಂಗನ್ ವರದಿ ಕುರಿತು ನಡೆದ ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಜಿಲ್ಲಾಧಿಕಾರಿಗೆ ಧೈರ್ಯ ತುಂಬಿದ್ದಾರೆ.

ಹಾಸನ ಜಿಲ್ಲಾಧಿಕಾರಿಗೆ ಕಿರುಕುಳವಿದೆ ಎಂದು ಹೇಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಯಾರಿಂದ ಕಿರುಕುಳ ಇದೆ ಅನ್ನೋದು ನಿಮಗೆ ಗೊತ್ತಿದೆ. ನಾನು ಅವರಿಗೆ ಫೋನ್ ಮಾಡಿ ಮಾತನಾಡಿದ್ದೇನೆ. ಯಾರಿಗೂ ಹೆದರಿಕೊಳ್ಳುವ ಅಗತ್ಯವಿಲ್ಲ. ಬಡವರ ಪರವಾಗಿ ಕೆಲಸ ಮಾಡಿ” ಎಂದು ತಿಳಿಸಿದ್ದಾರೆ. ಈ ಮೂಲಕ ರೇವಣ್ಣ ಅವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಇದೇ ವೇಳೆ, ತಮ್ಮ ಸರ್ಕಾರದ ಆಡಳಿತ ಹಾಗೂ ನಿರ್ಧಾರಗಳ ಬಗ್ಗೆ ನಡೆಯುತ್ತಿರುವ ಟೀಕೆಗಳಿಗೂ ಸಿಎಂ ಪ್ರತಿಕ್ರಿಯಿಸಿದರು. ಕೆಲವರು ಟೀಕೆ ಮಾಡುತ್ತಾರೆ, ಅದನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದ ಅವರು, ಸಂಪುಟ ಸಭೆ ನಡೆಸಿದರೂ, ಅಭಿವೃದ್ಧಿ ಕಾರ್ಯಗಳಿಗೆ ತೆರಳಿದರೂ ಟೀಕೆಗಳು ಕೇಳಿಬರುತ್ತವೆ ಎಂದು ಹೇಳಿದರು.

ಕಸ್ತೂರಿರಂಗನ್ ವರದಿ ಕುರಿತು ಮಲೆನಾಡು ಭಾಗದ ಜನರ ಆತಂಕಗಳನ್ನು ಆಲಿಸಲು ಮುಖ್ಯಮಂತ್ರಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.

Must Read