ಪ್ರವಾದಿ ಪ್ರಕರಣ: ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ

ಹೊಸದಿಗಂತ ವರದಿ ಹುಬ್ಬಳ್ಳಿ:‌ 

ಪ್ರವಾದಿ ವಿರುದ್ಧ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ‌ ಕುರಿತು ದೇಶದ ಕೆಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ

ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ನಿಯಂತ್ರಣದಲ್ಲಿದೆ. ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಂಡು ಕಟ್ಟೆಚ್ಚರದಿಂದ ಇರಲು ಸೂಚಿಸಲಾಗಿದೆ. ಪ್ರತಿಯೊಂದು‌ ಠಾಣೆಯ ಸಿಪಿಐ ಅವರನ್ನು ಉಸ್ತುವಾರಿ ಮಾಡಿ, ಎಲ್ಲ ಸಮುದಾಯದವರ ಜತೆ ಸೌಹಾರ್ದಯುತ ವಾತಾವರಣ ನಿರ್ಮಿಸುವಂತೆ ತಿಳಿಸಲಾಗಿದೆ. ಹುಧಾ ಪೊಲೀಸ್ ಕಮಿಷನರ್ ಹಾಗೂ ಧಾರವಾಡ ಎಸ್ಪಿ ಜೊತೆಯೂ ಈ ಕುರಿತು ಚರ್ಚಿಸಿದ್ದೇನೆ ಎಂದರು.

ರಾಜ್ಯಸಭೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ವಿಧಾನಪರಿಷತ್ ಚುನಾವಣೆ ಪ್ರಚಾರಕ್ಕೆ ಬಂದಿದ್ದು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಲಿದ್ದೇನೆ. ನಾಲ್ಕು ಕ್ಷೇತ್ರಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವ ವಿಶ್ವಾಸವಿದೆ ಎಂದರು.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ತನಿಖೆ ಮುಂದುವರಿದಿದೆ. ಎಲ್ಲ ವಾರ್ಡ್‌ನ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು’ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!