October 16, 2026
Friday, October 16, 2026
spot_img

ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿಗಷ್ಟೇ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್‌ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದರು.

Must Read