ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂಗೆ ಕೊರೋನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಸಿಎಂ ಅವರು ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ತಪಾಸಣೆ ನಂತರ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಿಎಂ ಟ್ವೀಟ್ ಮಾಡಿದ್ದು, ಜ್ವರದ ಹಿನ್ನೆಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣ ಇರುವುದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ಯಾರೆಂಟೀನ್‌ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss