ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಾಮರಾಜನಗರ ಆಕ್ಸಿಜನ್ ಕೊರತೆ: ಇಂದು ತುರ್ತು ಕ್ಯಾಬಿನೆಟ್ ಸಭೆ ಕರೆದ ಸಿಎಂ ಬಿ.ಎಸ್. ಯಡಿಯೂರಪ್ಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾದ ದುರಂತದ ಬೆನ್ನಲ್ಲೇ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದ ಕಾರಣಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಜಿಲ್ಲಾಧಿಕಾರಿಗಳಿಂದ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಭಾನುವಾರ ರಾತ್ರಿ ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟಿರುವ ಆರೋಪ ಕೇಳಿಬರುತ್ತಿದ್ದಂತೆಯೇ ನಿನ್ನೆ ಸಚಿವ ಕೆ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರು ಚಾಮರಾಜನಗರಕ್ಕೆ ಪ್ರಯಾಣ ಮಾಡಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss