Wednesday, June 29, 2022

Latest Posts

ಸುಭಾಷ್‌ಚಂದ್ರ ಬೋಸ್ ಜಯಂತಿ ಆಚರಣೆಗೆ ಸಿಎಂ ನೇತೃತ್ವದಲ್ಲಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಈ ತಿಂಗಳ 23ರಂದು ಸುಭಾಷ್ ಚಂದ್ರ ಬೋಸ್ ಜಯಂತಿಯನ್ನು ಕರ್ನಾಟಕ-ಗೋವಾ ಎನ್‌ಸಿಸಿ ವತಿಯಿಂದ ವಿನೂತನವಾಗಿ ಆಚರಿಸಲು ಇಂದು ಸಿಎಂ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಜರಗಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವರ್ಚುವಲ್ ಮೂಲಕ ಭಾಗವಹಿಸಿದರು. ಹಿರಿಯ ಅಧಿಕಾರಿಗಳಾದ ಸರಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್, ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯದ ಅಧಿಕಾರಿ ಏರ್ ಕಮಾಂಡರ್ ಬಿ.ಎಸ್. ಕನ್ವರ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ, ರಜನೀಶ್ ಗೋಯೆಲ್, ಜಿ. ಕುಮಾರ ನಾಯ್ಕ್‌, ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವ ಕುಮಾರ್, ಗೃಹ ಇಲಾಖೆಯ ಡಾ. ಮಾಲಿನಿ ಕೃಷ್ಣಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss