9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಇಂದು ಸಿಎಂ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಮಕೂರು ಗ್ರಾಮಾಂತರಕ್ಕೆ ಭೇಟಿ ನೀಡಲಿದ್ದು, 9 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಇದೇ ವೇಳೆ ತುಮಕೂರು ಗ್ರಾಮಾಂತರದ ಸೋರೆಕುಂಟೆ ಬಳಿಯ ಪಿ ಗೊಲ್ಲಹಳ್ಳಿಯಲ್ಲಿ 41 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ 150 ಕೋಟಿ ರೂ. ವೆಚ್ಚದ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ  ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೃಷ್ಣಭೈರೇಗೌಡ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!