ಲೋಕಾಯುಕ್ತ ತನಿಖೆಗೆ ಆದೇಶ: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಹ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.

ಇದೀಗ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು, ಕಾನೂನು ಪರಿಣಿತರ ಸಲಹೆಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಇನ್ನು ಜನಪ್ರತಿನಿಧಿ ಕೋರ್ಟ್​ ತೀರ್ಪಿನ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಹೈಕೋರ್ಟ್​ ಆದೇಶ ಮೇಳೆ ಜನಪ್ರತಿನಿಧಿಗಳ ಕೋರ್ಟ್​ ತೀರ್ಪು ನೀಡಿದೆ. ಕೋರ್ಟ್​ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ತನಿಖೆ ಎದುರಿಸಲು ನಾವು ತಯಾರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನಾವು ಯಾವುದಕ್ಕೂ ಹೆದರಲ್ಲ, ತನಿಖೆಗೆ ನಾವು ತಯಾರಿದ್ದೇವೆ. ಆದ್ರೆ ಈಗ ಕೊಟ್ಟಿರುವ ಆದೇಶವನ್ನು ಇನ್ನೂ ಓದಿಲ್ಲ. ಕೇರಳದಿಂದ ಬಂದ ಮೇಲೆ ಆದೇಶದಲ್ಲಿ ಏನಿದೆ ನೋಡುತ್ತೇನೆ. ಕೋರ್ಟ್​ ಆದೇಶ ಸಿಕ್ಕಿದ ಮೇಲೆ ವಕೀಲರ ಜತೆ ಚರ್ಚಿಸ್ತೇನೆ ಆ ನಂತರ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ನಾವು ರಚಿಸಿರುವ ತನಿಖಾ ಆಯೋಗಕ್ಕೆ ಕೋರ್ಟ್​​ ತಡೆ ನೀಡಿಲ್ಲ. ಸಂಪೂರ್ಣವಾಗಿ ಆದೇಶ ಓದಿದ ಮೇಲೆ ನಾಳೆ ಪ್ರತಿಕ್ರಿಯೆ ನೀಡುತ್ತೇನೆ, ನಿನ್ನೆಯೂ ನಾನು ಹೇಳಿದ್ದೇನೆ, ಈಗಲೂ‌ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ನಾನು ಹೆದರುವುದಿಲ್ಲ. ದೂರುದಾರರು ಮೈಸೂರಿನವರು, ಹೀಗಾಗಿ ಅಲ್ಲೇ ತನಿಖೆ ಆಗುತ್ತೆ. ಆದೇಶ ಓದಿದ ನಂತರ ಸಂಪೂರ್ಣ ಪ್ರತಿಕ್ರಿಯೆ ನೀಡಬೇಕು. ಆದೇಶದ ಪ್ರತಿಯನ್ನು ಓದಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ಮುಂದಿನ ನಿರ್ಧಾರದ ನಾಳೆ (ಸೆ.26) ಬೆಳಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!