ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿನಿ ಹಾಲಿನ ದರ ಏರಿಕೆ ಕುರಿತು ಇಂದು ಸಭೆ ನಡೆಯಿತು.
ಸಭೆಯ ಬಳಿಕ ಮಾತನಾಡಿದ KMF ಅಧ್ಯಕ್ಷ ಭೀಮಾ ನಾಯ್ಕ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಬೇಕೆಂಬುವುದು ನಿರ್ಧಾರವಾಗಿದೆ. ಸಿಎಂ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರಿಸಲಾಗುತ್ತೆ. ಹಾಲಿನ ದರ ಹೆಚ್ಚಳ ಸಂಬಂಧ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.ಹಾಲಿನ ದರ ಎಷ್ಟು ಹೆಚ್ಚಳ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ ಎಂದು ತಿಳಿಸಿದರು.
ಹಾಲು ಒಕ್ಕೂಟಗಳು ಹಾಲು ಉತ್ಪಾದಕರ ಬೇಡಿಕೆ ಮನವರಿಕೆ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮನವರಿಕೆ ಮಾಡಿದ್ದೇವೆ. ಸದ್ಯ ಹಾಲಿನ ದರ ಎಷ್ಟು ಹೆಚ್ಚಿಸಬೇಕು ಎಂಬ ಕುರಿತು ಚರ್ಚೆಯಾಗಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಏರಿಕೆ ಸಂಬಂಧಪಟ್ಟ ಕ್ಯಾಬಿನೆಟ್ ನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.