ಚೆನ್ನವೀರ ಕಣವಿ ಶೀಘ್ರ ಚೇತರಿಕೆಗೆ ಸಿಎಂ ಹಾರೈಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.

ಕಣವಿ ಅವರ ಆರೋಗ್ಯದ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಇಂದು ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮುಖ್ಯ ಮಂತ್ರಿಗಳು, ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!