ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಸಿಬ್ಬಂದಿ ಮತ್ತು ಆಡಳಿ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿ ಪಡಿಸಿರುವ ‘ಡಿ.ಬಿ.ಟಿ’ ಮೊಬೈಲ್ ಅಪ್ಲಿಕೇಶನ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಚಾಲನೆ ನೀಡಿದರು.
ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಅಡಿ ಲಾಭ ಪಡೆದ ಫಲಾನುಭವಿಗಳಿಗೆ ಡಿ.ಬಿ.ಟಿ ಮೊಬೈಲ್ ಆಪ್ಅನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ ಲೋಡ್ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಲು ಆಪ್ ಸಹಕಾರಿಯಾಗಲಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದೆ.
ರಾಜ್ಯದಲ್ಲಿ ಈ ವರೆಗೆ ಸುಮಾರು 120 ಯೋಜನೆಗಳನ್ನು ಈ ವೇದಿಕೆಗೆ ಒಳಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 12 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಆಧಾರ್ ಸಂಖ್ಯೆಗೆ ಜೋಡಣೆಯಾದ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಹಣ ದುರುಪಯೋಗ, ಲೋಪ ದೋಷ ಅಥವಾ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.
ಕೊರೋನಾ ವೇಳೆ ಸರ್ಕಾರವು ಘೋಷಿಸಿದ ಎಲ್ಲಾ ಪ್ಯಾಕೇಜ್ಗಳು ಈ ವೇದಿಕೆ ಮೂಲಕವೇ ಪಾವತಿ ಮಾಡಲಾಗಿದೆ.ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಎಲ್ಲ ಯೋಜನೆಗಳನ್ನು ಡಿ.ಬಿ.ಟಿ. ವೇದಿಕೆಯಡಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ವೇದಿಕೆಯು ಫಲಾನುಭವಿಯನ್ನು ಆಧಾರ್ ಸಂಖ್ಯೆ ಮೂಲಕ ಗುರುತಿಸಿ ಫಲಾನುಭವಿಗಳ ಆರ್ಥಿಕ ವಿಳಾಸವಾಗಿ (Financial Address) ಪರಿಗಣಿಸಿ ನಗದು ವರ್ಗಾವಣೆಯನ್ನು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು.
ಈ ಆಯಪ್ ಅನ್ನು ನಾಗರಿಕರು ಹೆಚ್ಚು-ಹೆಚ್ಚಾಗಿ ಬಳಸಿದಾಗ ಪಾರದರ್ಶಕತೆ ಇರುವ ಸರ್ಕಾರದ ಉದ್ದೇಶ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ನಾಗರೀಕರು ಈ ಆಯಪ್ನ ಸದುಪಯೋಗ ಪಡೆದುಕೊಂಡು ಫಲಾನುಭವಿಗಳಿಗೆ ವರ್ಗಾವಣೆಯಾಗಿರುವ ನಗದು ವಿವರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.