ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಚಿವ ಡಾ ಸುಧಾಕರ್​ ಹೆಗಲ ಮೇಲಿದ್ದ ಎಲ್ಲ ಜವಾಬ್ದಾರಿ ಕಿತ್ತುಕೊಂಡ ಸಿಎಂ ಯಡಿಯೂರಪ್ಪ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಚಾಮರಾಜನಗರದಲ್ಲಿ 24 ಜನರು ಆಕ್ಸಿಜೆನ್ ಸಿಗದೇ ಸಾವನ್ನಪ್ಪಿದ್ದಾರೆ ಅನ್ನೋ ಆರೋಪ ಕೇಳಿ ಬಂದ ಬೆನ್ನಲ್ಲೇ ಇಂದು ಸಿಎಂ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಆರೋಗ್ಯ ಸಚಿವ ಡಾ. ಸುಧಾಕರ್​ಗೆ ನೀಡಿದ್ದ ಎಲ್ಲ ಜವಾಬ್ದಾರಿಯನ್ನೂ ಸಿಎಂ ಬಿ.ಎಸ್​ ಯಡಿಯೂರಪ್ಪ ಕಿತ್ತುಕೊಂಡಿದ್ದಾರೆ.
ಆರೋಗ್ಯ ಸಚಿವ ಡಾ ಸುಧಾಕರ್​ಗೆ ಕೇವಲ ಆರೋಗ್ಯ ಖಾತೆ ಮಾತ್ರ ಉಳಿಸಿರುವ ಸಿಎಂ, ಕೊರೋನಾಗೆ ಸಂಬಂಧಿಸಿದಂತೆ ಯಾವುದೇ ಜವಾಬ್ದಾರಿಯನ್ನೂ ನೀಡಿಲ್ಲ. ಸದ್ಯ ಜಗದೀಶ್ ಶೆಟ್ಟರ್‌ಗೆ ಆಕ್ಸಿಜನ್ ಜವಾಬ್ದಾರಿಯನ್ನು ಸಿಎಂ ನೀಡಿದ್ದರೆ, ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ್​ಗೆ ಯಾವುದೇ ಔಷಧದ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡಿದ್ದಾರೆ. ಇನ್ನು ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಬೆಡ್‌ಗಳ ವ್ಯವಸ್ಥೆ ಜವಾಬ್ದಾರಿ ಆರ್.ಅಶೋಕ್ ಹಾಗೂ ಬೊಮ್ಮಾಯಿ ಹೆಗೆಲಿಗೆ ಏರಿದೆ. ಅಲ್ಲದೇ ಮಹತ್ವದ ವಾರ್ ರೂಂ ಜವಾಬ್ದಾರಿಯನ್ನು ಅರವಿಂದ್ ಲಿಂಬಾವಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೀಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss