ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಅಯೋಧ್ಯೆಗೆ ಭೇಟಿ ನೀಡಿದ್ದು,ಈ ವೇಳೆ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ರಾಮ ಲಲಾನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು, ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಮತ್ತೊಂದು ಮಹತ್ವದ ಧಾರ್ಮಿಕ ಸ್ಥಳವಾದ ಹನುಮಾನ್‌ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.