ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಸಂಭ್ರಮಿಸಿದ ಮುಸ್ಲಿಂ ಯುವಕನ ಕೊಲೆ: ತನಿಖೆಗೆ ಆದೇಶಿಸಿದ ಸಿಎಂ ಯೋಗಿ ಆದಿತ್ಯನಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಇತಿಹಾಸಿಕ ಗೆಲುವನ್ನು ಸಂಭ್ರಮಿಸಿದ ಯುಪಿ ಖುಷಿನಗರದ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಈ ಕುರಿತು ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಮಾರ್ಚ್ 20 ರಂದು ಕಥರ್‌ಗರ್ಹಿಯಲ್ಲಿ ಮುಸ್ಲಿಂ ವ್ಯಕ್ತಿ ಬಾಬರ್ ಅಲಿಯನ್ನು ಯಾರೋ ಥಳಿಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಲಕ್ನೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಭಾನುವಾರ ಅವರ ಅಂತ್ಯಕ್ರಿಯೆಯನ್ನು ಮಾಡಲು ಕುಟುಂಬದವರು ನಿರಾಕರಿಸಿದ್ದಾರೆ. ಆತನನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವವರೆಗೂ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಬಾಬರ್ ಅಲಿ ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಕ್ಕಾಗಿ ಮತ್ತು ಬಿಜೆಪಿ ಗೆದ್ದಿದ್ದಕ್ಕೆ ವಿಜಯೋತ್ಸವ ಆಚರಿಸಿದ್ದಕ್ಕಾಗಿ ಆತನ ನೆರೆಹೊರೆಯವರು ಥಳಿಸಿ, ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಬಾಬರ್‌ನ ಕುಟುಂಬದ ಪ್ರಕಾರ, ಬಾಬರ್ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರಣ ಅವರ ನೆರೆಹೊರೆಯವರು ಅಸಮಾಧಾನಗೊಂಡಿದ್ದರು.ಬಿಜೆಪಿಯನ್ನು ಬೆಂಬಲಿಸದಿರುವ ಬಗ್ಗೆ ಅವರ ನೆರೆಹೊರೆಯವರು ಆತನಿಗೆ ಪದೇಪದೆ ಎಚ್ಚರಿಕೆ ನೀಡಿದ್ದರು ಎಂದು ಹೇಳಿಕೊಂಡಿದೆ.

ಮುಸ್ಲಿಂ ಯುವಕನ ಹತ್ಯೆಯನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕೂಡ ಖಂಡಿಸಿದ್ದು, ಟ್ವಿಟ್ಟರ್​ನಲ್ಲಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!