ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಪಂಚೂರ್ ಗ್ರಾಮದಲ್ಲಿರುವ ತಮ್ಮ ಪೂರ್ವಜರ ಮನೆಯಲ್ಲಿ ಶುಕ್ರವಾರ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ನಿಧನದ ಸುದ್ದಿಯನ್ನು ಪೌರಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ಆಡಳಿತ ದೃಢಪಡಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರ ಸಹೋದರ ಮಹೇಂದ್ರ ಸಿಂಗ್ ಬಿಷ್ಟ್ ಕೂಡ ತಾಯಿಯ ನಿಧನದ ಬಗ್ಗೆ ಮಾಹಿತಿ ನೀಡಿದ್ದು, ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದಾರೆ.
ಸಾವಿತ್ರಿ ದೇವಿ ಅವರ ಅಂತ್ಯಕ್ರಿಯೆ ಶನಿವಾರ ಹರಿದ್ವಾರದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಈ ಕುರಿತು ಹೆಚ್ಚಿನ ಅಧಿಕೃತ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಇನ್ನು, ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಷ್ಟ್ ಅವರು 2020ರ ಏಪ್ರಿಲ್ನಲ್ಲಿ ನಿಧನರಾಗಿದ್ದರು. ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದರು. ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲು ಸಾಧ್ಯವಾಗಿರಲಿಲ್ಲ.



