ರಾಮಮಂದಿರ ಗರ್ಭಗುಡಿಗೆ ಶಿಲಾಪೂಜೆ: ಯೋಗಿ ಆದಿತ್ಯಾನಾಥ್‌ರಿಂದ ಶಂಕುಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಅಯೋಧ್ಯೆಗೆ ಆಗಮಿಸಿದ್ದು, ರಾಮ ಮಂದಿರ ಗರ್ಭಗುಡಿಯ ಶಂಕುಸ್ಥಾಪನೆ ನೆರವೇರಿಸಿದರು. ಗರ್ಭಗುಡಿ ನಿರ್ಮಾಣದ ‘ಶಿಲಾಪೂಜೆ’ಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಮಲಲ್ಲಾ ಸದನ, ದ್ರಾವಿಡ ಶೈಲಿಯ ದೇವಾಲಯವನ್ನು ಉದ್ಘಾಟಿಸಿದರು.

ರಾಮಮಂದಿರದ ಗರ್ಭಗೃಹ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ರಾಮಮಾರ್ಚ, ದುರ್ಗಾ ಸಪ್ತಶತಿ, ರುದ್ರಾಭಿಷೇಕ, ರಾಮರಕ್ಷಾ ಸ್ತೋತ್ರ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸ, ಸುಂದರಕಾಂಡ ಪಾರಾಯಣ ನಡೆಯುತ್ತಿದೆ.

ಶಿಲಾನ್ಯಾಸ ಸಮಾರಂಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ‘ಗರ್ಭಗುಡಿʼಗೆ  ಕೆತ್ತಿದ ಮೊದಲ ಶಿಲೆಯನ್ನು ಇಟ್ಟು ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಟ್ಟರು. ದೇವಾಲಯದ ನಿರ್ಮಾಣದ ಉಸ್ತುವಾರಿ ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಗರ್ಭಗುಡಿಯು ಡಿಸೆಂಬರ್ 2023 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆಗಸ್ಟ್ 5, 2020 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು ಮತ್ತು ಅಂದಿನಿಂದ ನಿರ್ಮಾಣ ಕಾರ್ಯವು ತ್ವರಿತ ಗತಿಯಲ್ಲಿ ಸಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!