ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ತಡೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಸಿಎಂ ಸೋಂಕಿತರ ಚಿಕಿತ್ಸೆಗೆ ಬೆಡ್, ಆಕ್ಸಿಜನ್ ಪೂರೈಕೆ, ಲಸಿಕೆ ನೀಡುವ ಸಂಬಂಧ ಚರ್ಚೆ ನಡೆಸಿದರು.
ಕೊರೋನಾ ಸೋಂಕಿತರಿಗೆ ಚಿಕಿತ್ಸೆಗಾಗಿ ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುವುದು, ಆದ್ದರಿಂದ ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕ ನೀಡಿ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು, ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ತಜ್ಞರ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು
ರೆಮ್ಡಿಸಿವಿರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆ ಮಾಡಲಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರಚಿಸಲಾಗುವುದು, ಲಸಿಕೆ ವಿತರಣೆ ಪ್ರಕ್ರಿಯೆಯೆನ್ನು ವೇಗವನ್ನು ಹೆಚ್ಚಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.